ಕಾವಳಕಟ್ಟೆ ಎನ್.ಸಿ.ರೋಡ್ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ ಪೈಕಿ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದ್ದು, ಇನ್ನೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡಬ ನಿವಾಸಿ ಅನನ್ಯ ಎಂಬವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಬೆಳ್ತಂಗಡಿ ನಿವಾಸಿ ಪೃಥ್ವಿ ರಾವ್ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎನ್.ಸಿ.ರೋಡ್ ತಿರುವು ಆಪಾಯಕಾರಿಯಾಗಿದ್ದು ಅನೇಕ ಅಪಘಾತಗಳು ಸಂಭವಿಸಿವೆ. ಇಬ್ಬರೂ ಕೂಡ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರಾಗಿದ್ದು ಬೆಳ್ತಂಗಡಿಯಿಂದ ಕಾಲೇಜಿಗೆ ಹೋಗುವ ವೇಳೆ ಎನ್.ಸಿ.ರೋಡ್ ತಿರುವಿನಲ್ಲಿ ವ್ಯಾಗನಾರ್ ಕಾರು ಮತ್ತು ಹೊಂಡಾ ಆಕ್ಟೀವ್ ಮಧ್ಯೆ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಎಸ್.ಐ.ರಾಜೇಶ್ ಕೆ.ವಿ. ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…