ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಕಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ. ಬಿಸಿರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಅವರು ಕ್ಯಾಶ್ ಕೌಂಟರ್‌ನಲ್ಲಿ ಕುಳಿತ್ತಿದ್ದ ಗಂಡನಿಗೆ ಬುರ್ಖಾ ದರಿಸಿಕೊಂಡು ಬಂದು ಕತ್ತಿಯಿಂದ ಕಡಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಆರೋಪಿ ಜ್ಯೋತಿ ಸೋಮಯಾಜಿ ಅವರನ್ನು ಬಂಟ್ವಾಳ ಪೋಲೀಸರು ಕ್ಷಣಾರ್ಧದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ನಗರ ಪೋಲೀಸರು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಕೌಟುಂಬಿಕ ಕಲಹದ ಬಗ್ಗೆ ಮಾತುಗಳು ಕೇಳಿ ಬಂದಿದೆ. ಕೌಟುಂಬಿಕ ವಿಚಾರಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲು ಕೂಡ ಏರಿದ್ದಾರೆ ಎನ್ನಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…