ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ ಮತ್ತು 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ.

ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ರು, ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಸಲಾಂ ಅಡ್ಡೂರು ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಈಗ ಈತನನ್ನು ಸುರತ್ಕಲ್ ಪೋಲೀಸರು ಬಂಧಿಸಿದ್ದಾರೆ.



