ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಗಣತಿ ಕಾರ್ಯದ ಸಮಯದಲ್ಲಿ ಅನಾರೋಗ್ಯಕ್ಕೆ ತುತ್ತಾದಂತಹ ಶಿಕ್ಷಕರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಸಿ..!

ಜಿಲ್ಲಾಧಿಕಾರಿ ದರ್ಶನ್ ಅವರು ಬಂಟ್ವಾಳಕ್ಕೆ ಬೇಟಿ ನೀಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ನಡೆದಂತಹ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ಕಾರ್ಯದಲ್ಲಿ ಕರ್ತವ್ಯ ನಿರ್ವಹಿಸಿದ ಕೆಲವು ಶಿಕ್ಷಕರಿಗೆ ಗಣತಿ ಕಾರ್ಯದ ಸಮಯದಲ್ಲಿ ಮನೆ- ಮನೆ ಭೇಟಿ ನೀಡುವಾಗ ಹೆಜ್ಜೆನು ಹುಳ, ನಾಯಿಗಳು ಕಚ್ಚಿ ಹಾಗೂ ರಸ್ತೆಯ ಅಪಘಾತಗಳಿಂದ ಅನಾರೋಗ್ಯಕ್ಕೆ ತುತ್ತಾದಂತಹ ಶಿಕ್ಷಕರನ್ನು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.

ಅಂತಹ ಕಷ್ಟದ ಸಮಯದಲ್ಲೂ ಸಹ ಧೃತಿಗೆಡದೆ ಯಶಸ್ವಿಯಾಗಿ ಗಣತಿ ಕಾರ್ಯವನ್ನು ಪೂರ್ಣಗೊಳಿಸಿದ ಸರ್ಕಾರಿ ಪ್ರೌಢ ಶಾಲೆ ಸಜೀಪ ಮೂಡ, ಗ್ರಾಮದ ಶಾಲಾ ಶಿಕ್ಷಕ ವೆಂಕಟರಮಣ ಆಚಾರ್ ಹಾಗೂ ಕಾವಳಮೂಡೂರು ಗ್ರಾಮದ ಕಾವಳಕಟ್ಟೆ ಎಂಬಲ್ಲಿನ ಶಾಲಾ ಶಿಕ್ಷಕಿ ಸುರೇಖಾ ಇವರಿಗೂ ಜಿಲ್ಲಾಡಳಿತದ ವತಿಯಿಂದ ಕೃತಜ್ಞತೆಯನ್ನು ಸಲ್ಲಿಸಿರುತ್ತಾರೆ.

ಜೊತೆಗೆ ಕಾವಳ ಮೂಡೂರು ಗ್ರಾಮದ ಪ್ರೌಢಶಾಲಾ ವಿದ್ಯಾರ್ಥಿಗಳ ಕೊಠಡಿಗೆ ತೆರಳಿ ಅವರಿಗೆ ದಿನನಿತ್ಯ ನೀಡುತ್ತಿರುವ ಉಟೋಪಚಾರ ಪೌಷ್ಟಿಕತೆಯಿಂದ ಕೂಡಿದೆಯೇ ಎಂದು ವಿಚಾರಿಸುವುದರ, ಜೊತೆಗೆ ಶಾಲಾ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರಾ ಎಂಬ ಬಗ್ಗೆ ಹಾಗೂ ಪ್ರತಿಯೊಂದು ಶಾಲಾ ವಿದ್ಯಾರ್ಥಿಯನ್ನು ತಾವು ಭವಿಷ್ಯದಲ್ಲಿ ಏನಾಗಲು ಬಯಸಿದ್ದೀರಿ ಎಂದು ಎಲ್ಲರನ್ನು ಪ್ರೀತಿಯಿಂದ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀ ಮಂಜುನಾಥನ್ ಎಂ ಜಿ, ಶಿಕ್ಷಣ ಸಂಯೋಜಕರಾದ ಶ್ರೀಮತಿ ಪ್ರತಿಮಾ ವೈ ವಿ ಹಾಗೂ ಕಂದಾಯ ನಿರೀಕ್ಷಕರುಗಳಾದ ಜೆ ಜನಾರ್ಧನ್, ವಿಜಯ್ ಆರ್, ರವಿ ಎನ್ ಇವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!