ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಮಗೌಡನಹಳ್ಳಿ ಗ್ರಾಮದ ಸೋಮಶೇಖರ್‌ರವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ.
ನಂತರ ಗ್ರಾಮಸ್ಥರ ಕೂಗಾಟದಿಂದ ಗಾಬರಿಗೊಂಡು ಪರಾರಿಯಾಗಿದೆ. ವಾರದ ಹಿಂದಷ್ಟೆ ಇದೆ ಗ್ರಾಮದ ರೈತರ ಎರಡು ಹಸುಗಳು ಹುಲಿಗೆ ಬಲಿಯಾಗಿದ್ದವು, ಹೀಗೆ ಒಂದರ ಮೇಲೊಂದು ಸಾಕು ಪ್ರಾಣಿಗಳ ಮೇಲೆ ದಾಳಿ ನಡೆದು ರೈತರು ಸಂಕಷ್ಟಕ್ಕೆ ಸಿಲುಕುತ್ತಿದ್ದರೂ ಅರಣ್ಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಇದಕ್ಕೆ ಪರಿಹಾರ ಕಂಡುಕೊಡುವಲ್ಲಿ ವಿಫಲವಾಗಿದ್ದಾರೆ ಎಂದು ಯುವ ರೈತ ಮುಖಂಡ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಹನಗೋಡು ಹೋಬಳಿಯ ಕಾಡಂಚಿನ ಗ್ರಾಮಗಳಾದ ಹನಗೋಡು, ಬಿ.ಆರ್ ಕಾವಲು, ಕಾಮಗೌಡನಹಳ್ಳಿ, ನೇಗತ್ತೂರು, ದೊಡ್ಡಕಟ್ಟೆ ಹೆಮ್ಮಿಗೆ ಗ್ರಾಮ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಾಕು ಪ್ರಾಣಿಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಹುಲಿ ಹಾಗೂ ಚಿರತೆ ದಾಳಿಯಿಂದ ಬೇಸತ್ತು ತಾಲ್ಲೂಕಿನಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…