ಮಂಗಳೂರು ಹೊರವಲಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದ ಘಟನೆ ನಡೆದಿದೆ.
ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಮೇಲೆ ದಾಳಿ ಮಾಡಲಾಗಿದೆ, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಬಂದರಿನ ರೌಡಿ ಶೀಟರ್ ಸಿನಾನ್, ವೇಣೂರಿನ ಇರ್ಷಾದ್, ಅಕ್ರಮ್, ಸಾದಿಕ್ ಬಂಧಿತ ಆರೋಪಿಗಳು.
ಇವರು ಬೈಕ್‌ನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದ ಬಗ್ಗೆ ಮೊಬೈಲ್‌ನಲ್ಲಿ ಅಖಿಲೇಶ್ ವಿಡಿಯೋ ಮಾಡಿದ್ದಾರೆ. ಇನ್ನೊಂದು ಮೂಲದ ಪ್ರಕಾರ ಬೈಕಿನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದಾಗ ನಶೆಯ ಅಮಲಿನಲ್ಲಿದ್ದವರು ತಮ್ಮ ವಾಹನವನ್ನು ಓವರ್ ಟೇಕ್ ಮಾಡಿದ್ದ ಕಾರಣಕ್ಕೆ ಅಖಿಲೇಶ್ ಮೇಲೆ ಹಲ್ಲೆ ಮಾಡಿ ಆತನ ಮೇಲೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಅಖಿಲೇಶ್ ಮೂಡಬಿದ್ರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…