ವಿಟ್ಲ ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷದ್ ವತಿಯಿಂದ ಭೇಟಿ ಮಾಡಿ ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚುವಂತೆ ಪೋಲಿಸ್ ಇಲಾಖೆಗೆ ಮನವಿ ಮಾಡಲಾಗಿದೆ.
ಕೇರಳ ಗಡಿ ಪ್ರದೇಶವಾಗಿರುವ ವಿಟ್ಲದ ಪೆರುವಾಯಿ ಗ್ರಾಮದ ಅಶ್ವಥನಗರ ಬಳಿಯಿರುವ ವ್ಯವಸಾಯ ಸೇವಾ ಸಹಕಾರಿ ಸಂಘದ ಅವರಣದಿಂದ ನಾಲ್ಕು ಗೋವುಗಳ ಕಳ್ಳತನವಾಗಿ ಇಂದಿಗೆ ಆರು ದಿನವಾಗಿದ್ದು, ಎಫ್.ಐ.ಆರ್ ದಾಖಲಿಸಿ ಇಂದಿಗೆ ನಾಲ್ಕು ದಿನ ಕಳೆದರು ಇಂದಿಗೂ ಗೋವು ಪತ್ತೆಯಾಗಿಲ್ಲ ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲೆಯ ವತಿಯಿಂದ ಗೋವು ಕಳೆದುಕೊಂಡ ಪೆರುವಾಯಿಯ ಗಣೇಶ್ ಎಂಬವರ ಮನೆಗೆ ಭೇಟಿ ಮಾಡಿ ಘಟನೆ ಬಗ್ಗೆ ವಿಚಾರಿಸಿ ನಂತರ ವಿಟ್ಲ ಪೋಲಿಸ್ ಠಾಣೆಗೆ ತೆರಳಿ ತನಿಖೆಯ ಪ್ರಗತಿ ಬಗ್ಗೆ ಪೋಲಿಸ್ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡು ಶೀಘ್ರವಾಗಿ ಗೋಕಳ್ಳ ಆರೋಪಿಗಳನ್ನು ಪತ್ತೆ ಹಚ್ಚಬೇಕು ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮನವಿ ಮಾಡಲಾಗಿದೆ. ಇನ್ನೂ ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…