ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಮೆಮಾರ್ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆಯಲು ಮುಂದಾದ ವ್ಯಕ್ತಿಯಿಂದ ಪಂಚಾಯತ್ ಮೂರು ಸಾವಿರ ರೂಪಾಯಿ ದಂಡ ವಸೂಲಿ ಮಾಡಿದೆ.
ಪುದು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ರಮ್ಲಾನ್ ಮಾರಿಪಳ್ಳ ಅವರು ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪ್ರಥಮ ಸಭೆಯಲ್ಲೇ ನಿರ್ಣಯ ಕೈಗೊಂಡಿದ್ದಾರೆ. ಅದೂ ಅಲ್ಲದೆ ಕಸ ಎಸೆಯುವವರ ಬಗ್ಗೆ ಸ್ಪಷ್ಟ ಮಾಹಿತಿ ನೀಡಿದವರಿಗೆ ಒಂದು ಸಾವಿರ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ. ಅಮೆಮಾರ್ ಎಂಬಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿರುವವರು ತಡರಾತ್ರಿ ತ್ಯಾಜ್ಯವನ್ನು ಎಸೆಯಲು ಬಂದಾಗ ಸ್ಥಳೀಯರು ತಡೆದು ಕಸ ಎಸೆದವರ ಮಾಹಿತಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ರವರಿಗೆ ತಿಳಿಸಿದ್ದು ಈ ಕುರಿತಂತೆ ದಂಡ ವಸೂಲಿ ಮಾಡಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…