ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಸುಮಾರು 99 ವರ್ಷ ಶಾರದಾ ಪೂಜಾ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನಡೆದುಕೊಂಡು ಬಂದಿದ್ದು ದಿ.ಸದಾನಂದ ಪೂಂಜರ ನೇತೃತ್ವದಲ್ಲಿ ಶುರುವಾದ ಈ ಶಾರದಾ ಪೂಜಾ ಕಾರ್ಯಕ್ರಮವು 99 ವರ್ಷಗಳನ್ನು ಮುಗಿಸಿ ಇದೀಗ 100ನೇ ವರ್ಷಕ್ಕೆ ಹೆಜ್ಜೆಯನ್ನು ಇಟ್ಟಿದೆ.
ಈ ನಿಟ್ಟಿನಲ್ಲಿ ಇಂದು ಹೊಸ- ಹೊಸ ಯೋಚನೆ ಹಾಗೂ ಯೋಜನೆಯ ಜೊತೆಗೆ ಸಮಾಲೋಚನಾ ಸಭೆಯನ್ನು ನಡೆಸಲಾಯಿತು. ಶತಮಾನೋತ್ಸವ ಕಾರ್ಯಕ್ರಮವನ್ನು 5 ದಿನಗಳ ಕಾಲ ನಡೆಸುವುದಾಗಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು ಜೊತೆಗೆ ಸಜೀಪಮೂಡ ಶಾಲೆಗೆ ದೊಡ್ಡಮಟ್ಟದಲ್ಲಿ ಏನಾದರೂ ಕೊಡುಗೆಯನ್ನು ನೀಡಬೇಕೆಂದು ಸಭೆಯಲ್ಲಿ ಚರ್ಚೆಯನ್ನು ಕೂಡ ಮಾಡಲಾಯಿತು. ಜೊತೆಗೆ ಶತಮಾನೋತ್ಸವದ ನಿಮಿತ್ತ ಹೊರೆಕಾಣಿಕೆ ಹಾಗೂ ವಿಜೃಂಭಣೆಯ ಶೋಭಯಾತ್ರೆಯನ್ನು ನಡೆಸಬೇಕು ಎಂಬ ಚರ್ಚೆಯೂ ಈ ಸಂದರ್ಭದಲ್ಲಿ ನಡೆಸಲಾಯಿತು. ಇನ್ನು ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ಸಮಾಜ ಸೇವಕರೂ ಹಾಗೂ ಉದ್ಯಮಿಗಳೂ ಆಗಿರುವ ನಗ್ರಿಗುತ್ತು ಶ್ರೀ ವಿವೇಕ್ ಶೆಟ್ಟಿಯವರನ್ನು ಆಯ್ಕೆ ಮಾಡಲಾಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಇದು ಒಂದು ಪುಣ್ಯದ ಹಾಗೂ ಜವಬ್ದಾರಿಯುತ ಸ್ಥಾನಮಾನವನ್ನು ನನಗೆ ನೀವು ನೀಡಿದ್ದೀರಿ. ನಿಮ್ಮ ಜೊತೆಗೆ ನಾನು ಖಂಡಿತವಾಗುಯೂ ಇರುತ್ತೇನೆ. ನಾವೆಲ್ಲರೂ ಜೊತೆಯಾಗಿ ಶತಮಾನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸೋಣ ಎಂದರು. ಇನ್ನು ಸಭೆಯಲ್ಲಿ ಶ್ರೀ ದೇವಿಪ್ರಸಾದ್ ಪೂಂಜಾ, ಶ್ರೀಕಾಂತ್ ಶೆಟ್ಟಿ ಸಂಕೇಶ, ಶಿವಪ್ರಸಾದ್ ಶೆಟ್ಟಿ, ಗಿರೀಶ್ ಪೆರ್ವ, ನವೀನ್ ಆಳ್ವಾ, ಯೋಗಿಶ್ ಬೆಳ್ಚಾಡ, ಪ್ರಹ್ಲಾದ್ ಹಾಗೂ ಕಿಶೋರ್, ಪುಶ್ಪಲತಾ, ಹಾಗೂ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…