ಹುಣಸೂರು ತಾಲೂಕು ಹನಗೋಡು ಹೋಬಳಿ ಗೌಡನಕಟ್ಟೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.
ನಿನ್ನೆಯಷ್ಟೆ ದಾಳಿಯಿಂದ ಗ್ರಾಮದ ಇಬ್ಬರು ರೈತರು ಬಚಾವ್ ಆಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರಿಂದ ಗ್ರಾಮಸ್ಥರ ಆಕ್ರೋಶಕ್ಕೆ ರಾತ್ರಿ ಇಡೀ ಹುಲಿ ಸೆರೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯವರು ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮದ ಹೊರವಲಯದ ಹೊಲದ ಮಧ್ಯದಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ನಾಲ್ಕು ಆನೆಗಳೊಂದಿಗೆ ಟಾಸ್ಕ್ ಪೋರ್ಸ್ ಸಿಬ್ಬಂದಿಯಿಂದ ಕಾರ್ಯಾಚರಣೆ ಮಾಡಿ ಅರವಳಿಕೆ ನೀಡಿ ಹುಲಿ ಸೆರೆ ಹಿಡಿಯಲಾಗಿದೆ. ನಂತರ ಪ್ರಾಥಮಿಕ ಚಿಕಿತ್ಸೆ ನೀಡಿ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಇನ್ನು ಮರಿ ಹುಲಿಗಳಿರುವ ಸಾಧ್ಯತೆ ಹಿನ್ನಲೆ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…