ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯಿಗೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಬಳಸುತ್ತಿದ್ದ ಲೋಹದ ಕಾಲುಸಂಕ 4 ವರ್ಷಗಳ ಹಿಂದೆ ಕುಸಿದು ಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ದೋಣಿಯಲ್ಲಿ ಸಂಚರಿಸಿ ಸ್ದಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರೊಂದಿಗೆ ಬುಧವಾರ ದೋಣಿಯಲ್ಲಿಯೇ ಕಾಲುಸಂಕ ಇದ್ದ ಸ್ಥಳಕ್ಕೆ ತೆರಳಿ ಸಮಗ್ರವಾಗಿ ಪರಿಶೀಲಿಸಿದರು. ಕಾಲುಸಂಕದ ಪುನರ್ ನಿರ್ಮಾಣ ಅಥವಾ ದುರಸ್ತಿಯ ಬಗ್ಗೆ ತಾಂತ್ರಿಕ ಅಭಿಪ್ರಾಯ ಪಡೆದು ಶೀಘ್ರದಲ್ಲಿ ತೀರ್ಮಾನವೊಂದನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…