ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನಡೆದಿದೆ.
ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿ ಒಟ್ಟು 12 ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇವರ ಪೈಕಿ ಐವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…