ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದ್ದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜರೂರು ಪೋಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ.
ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ ಎಂಬಾತ ನ.25 ರಂದು ನಾಪತ್ತೆಯಾಗಿದ್ದ, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಕೂಡ ದಾಖಲಾಗಿತ್ತು. ಈ ಮಧ್ಯೆ ಅದೇ ದಿನ ಮಧ್ಯಾಹ್ನದ ವೇಳೆ ಈತನ ಮೃತದೇಹ ಮಂಗಳೂರು ತಾಲೂಕಿನ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲುವಿನ ಗುಡ್ಡದಲ್ಲಿ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು, ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜರೂ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು.
ಆದರೆ ಮನೆಯವರಿಗೆ ಈತನ ಸಾವಿನ ಬಗ್ಗೆ ಸಂಶಯವಿದ್ದು, ಇದೊಂದು ವ್ಯವಸ್ಥಿತ ರೀತಿಯ ಕೊಲೆಯಾಗಿರಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ಇದೀಗ ತಾಯಿ ಠಾಣೆಯ ಮೆಟ್ಟಿಲು ಏರಿದ್ದಾರೆ. ರಮಾನಂದ ಅವರಿಗೆ ಕಳೆದ ಮೂರು ವರ್ಷಗಳಿಂದ ವಾಮಂಜೂರು ಭಾಗದ ಹುಡುಗಿ ಜೊತೆ ಪ್ರೀತಿ ಇತ್ತು, ಕೆಲ ದಿನಗಳಿಂದ ಇವರಿಬ್ಬರ ನಡುವೆ ಭಿನ್ನಾಭಿಪ್ರಾಯ ಬಂದಿದ್ದು, ಆಕೆಯ ಕುಟುಂಬಿಕರು ಈತನಿಗೆ ಬೆದರಿಕೆ ಹಾಕಿದ್ದಾರೆ ಎಂಬ ದೂರು ಮನೆಯವರದ್ದು. ಹಾಗಾಗಿ ಹುಡುಗಿಯ ಜೊತೆ ಮನೆಯವರು ಸೇರಿ ಈತನನ್ನು ಕೊಲೆ ಮಾಡಿದ್ದಾರೆ ಎಂಬ ದೂರನ್ನು ತಾಯಿ ಜಾನಕಿ ಅವರು ನೀಡಿದ್ದು, ನ್ಯಾಯಕ್ಕಾಗಿ ಪೋಲೀಸ್ ಮೊರೆ ಹೋಗಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…