ಬೇರೆ ಶಾಲೆಗೆ ನಿಯೋಜನೆಗೊಂಡಿರುವ ಶಿಕ್ಷಕರನ್ನು ಮತ್ತೆ ತಮ್ಮ ಶಾಲೆಯಲ್ಲಿ ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿ ದೇವಸ್ಯ ಮುಡೂರು ಹಿರಿಯ ಪ್ರಾಥಮಿಕ ಶಾಲೆಯ ಪೋಷಕರು, ವಿದ್ಯಾರ್ಥಿಗಳು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಸೇರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭ ಮಾತನಾಡಿದ ಎಸ್.ಡಿ.ಎಂ.ಸಿ. ಅಧ್ಯಕ್ಷ ವಸಂತ ಮುದಿಮಾರ್, ನಮ್ಮ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಳೆದೆರಡು ವರ್ಷಗಳಿಂದ ಜಾಸ್ತಿಯಾಗಿದೆ. ಆದರೆ ಅದಕ್ಕೆ ಪೂರಕವಾಗಿ ಶಿಕ್ಷಕರಿಲ್ಲ. 94 ಮಕ್ಕಳಿರುವ ಶಾಲೆಯಲ್ಲಿ ಸರಕಾರ ನಿಯೋಜಿಸಿದ ಮೂವರು ಶಿಕ್ಷಕರಲ್ಲಿ ಒಬ್ಬರನ್ನು ಬೇರೆ ಶಾಲೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಇದರಿಂದ ಶಾಲೆಯ ಚಟುವಟಿಕೆಗಳಿಗೆ ತೊಂದರೆಯಾಗುತ್ತಿದೆ. ಪಾಠ ಮಾಡಲು ಶಿಕ್ಷಕರ ಕೊರತೆ ಇರುವ ಹಿನ್ನೆಲೆಯಲ್ಲಿ ಮಕ್ಕಳನ್ನು ಪೋಷಕರು ಕಚೇರಿ ಮುಂಭಾಗ ಕರೆದುಕೊಂಡು ಬಂದಿದ್ದಾರೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಯಶವಂತ್, ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಪ್ರಮೀಳಾ, ಸದಸ್ಯರಾದ ಶಿವಾನಂದ ಪೂಜಾರಿ, ಕರೀಮ್, ಸುರೇಶ್ ಪೂಜಾರಿ, ಹರೀಶ್ ಕುಂಟಾಲಪಲ್ಕೆ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…