ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ….!

ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಬಂದಿದ್ದ ಇವರು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ನವೆಂಬರ್ 30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ನ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಟ ಮಾಡಿರುವ ಪ್ರಕರಣ ಹಾಗೂ ಅಮಲ್ ಕೃಷ್ಣನ ವಿರುದ್ದ ತಲಶೇರಿ ಹಾಗೂ ಕುರಚೂಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!