ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೇರಳದ ವೆಲ್ಲಾಡ್ ಒಟ್ಟತ್ತಾಯಿ ನಿವಾಸಿ ಅಲೆಕ್ಸ್ ಡೊಮಿನಿಕ್ ಮತ್ತು ಕಲ್ಲಿಕೋಟೆಯ ಕುರಚೂರು ನಿವಾಸಿ ಅಮಲ್ ಕೃಷ್ಣ ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಬಂದಿದ್ದ ಇವರು ಮಂಗಳೂರು ರೈಲ್ವೇ ಜಂಕ್ಷನ್ ಪ್ರದೇಶದಲ್ಲಿ ಸುತ್ತಾಡಿದ ಬಳಿಕ ನಾಗುರಿಯ ಬಸ್ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಹಾಗೂ ಜೆಪ್ಪಿನಮೊಗರು ಆದಿಮಾಯೆ ದೇವಸ್ಥಾನ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್ ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ನವೆಂಬರ್ 30ರಂದು ಮಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆದ ಪೊಲೀಸರು ಆರೋಪಿಗಳಾದ ಅಲೆಕ್ಸ್ ಡೊಮಿನಿಕ್ ಹಾಗೂ ಅಮಲ್ ಕೃಷ್ಣರನ್ನು ಬಂಧಿಸಿ ಎರಡು ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳ ಮೊತ್ತ 1.23 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿ ಅಲೆಕ್ಸ್ನ ವಿರುದ್ದ ಕೇರಳದ ಅಲಕ್ಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಾಗಟ ಮಾಡಿರುವ ಪ್ರಕರಣ ಹಾಗೂ ಅಮಲ್ ಕೃಷ್ಣನ ವಿರುದ್ದ ತಲಶೇರಿ ಹಾಗೂ ಕುರಚೂಂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಕೂಟರ್ ಕಳವು ಮಾಡಿದ ಪ್ರಕರಣಗಳು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…