ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಇನ್ನೋವಾ ಕಾರಿನಲ್ಲಿ ಗೋ ಸಾಗಾಟ; ಗೋ ಕಳ್ಳರ ಬಂಧನ

ವಾಹನವೊಂದರಲ್ಲಿ ಗೋವುಗಳನ್ನು ಸಾಗಿಸುವ ವೇಳೆಯಲ್ಲಿ ವಾಹನ ಕೆಟ್ಟುಹೋಗಿದ್ದು, ಗೋವುಗಳನ್ನು ಪುತ್ತೂರು, ನರಿಮೊಗರಿನ ನಡುರಸ್ತೆಯಲ್ಲಿ ಬಿಟ್ಟು ಹೋದ ಘಟನೆ ನಡೆದಿದೆ.

‘ಅವುಗಳನ್ನು ಸ್ಥಳೀಯರ ಸಹಕಾರದಿಂದ ಪುತ್ತೂರು ನಗರ ಠಾಣೆಗೆ ಹಸ್ತಾಂತರಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಗೋವುಗಳನ್ನು ಯಾರೋ ಕಳ್ಳರು ಕದ್ದು ತಂದಿರಬಹುದೆಂದು ಸಂಶಯವಿದೆ. ಕೃತ್ಯವೆಸಗಿದ ಆರೋಪಿಗಳನ್ನು ಪತ್ತೆಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕೋರುವ ದೂರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪ್ರಕರಣದ ತನಿಖೆ ನಡೆಸಿದ ಪೋಲಿಸರು ಆರೋಪಿಗಳಾದ ಉಳ್ಳಾಲ ಸಜಿಪನಡು ನಿವಾಸಿಗಳಾದ ಆಶಿಕ್ ಪಾಷಾ ಹಾಗೂ ಅಬ್ದುಲ್ ಲತೀಫ್ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ 4 ಕರುಗಳನ್ನು ಹಾಗೂ ಒಂದು ದನವನ್ನು ಸಾಗಿಸುವ ವೇಳೆ ವಾಹನ ಹಾಳಾದುದರಿಂದ ಆರೋಪಿಗಳು ಜಾನುವಾರುಗಳನ್ನು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ವಶಕ್ಕೆ ಪಡೆದಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!