ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕಾಗಿ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ಏರ್ ಪೋರ್ಟಲ್ಲಿ ಬಂದಿಳಿದ ಮುಖ್ಯಮಂತ್ರಿಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜ ಮತ್ತಿತರರು ಸ್ವಾಗತಿಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಪೊಲೀಸರಿಂದ ಗೌರವ ರಕ್ಷೆ ಸ್ವೀಕರಿಸಿದ್ದಾರೆ. ಶಿವಗಿರಿ ಮಠ, ವರ್ಕಲ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನಲ್ಲಿ ನಡೆಯಲಿರುವ ಶ್ರೀ ನಾರಾಯಣ ಗುರು-ಗಾಂಧೀಜಿ ಸಂವಾದ ಶತಮಾನೋತ್ಸವದ ಪ್ರಯುಕ್ತ ಆಯೋಜಿಸಿರುವ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬ್ದಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಕಾರ್ಯಕ್ರಮ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…