ಉಡುಪಿ ಚಿಟ್ಪಾಡಿಯ ಶಾರದಾಂಬ ದೇವಾಸ್ಥಾನ ಗೋಪುರ ಬಳಿಯ ಮನೆಯೊಂದರಲ್ಲಿ ನ.30ರಂದು 65.79 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕುಕ್ಕೆಹಳ್ಳಿ ಗ್ರಾಮದ ಕುಕ್ಕಿಕಟ್ಟೆ ನಿವಾಸಿ ಸುಕೇಶ ನಾಯ್ಕ್ ಬಂಧಿತ ಆರೋಪಿ. ಚಿಟ್ಪಾಡಿಯ ಶೈಲಾ ವಿಲ್ಲೆಲ್ ಮೀನಾ ಅವರ ಮನೆಗೆ ನುಗ್ಗಿದ ಕಳ್ಳರು ಸುಮಾರು 65.79 ಲಕ್ಷ ಮೌಲ್ಯದ ಸೊತ್ತು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಉಡುಪಿ ನಗರ ಠಾಣೆ ಪೊಲೀಸರು, ಕಿನ್ನಿಮೂಲ್ಕಿ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಚಾರಣೆ ವೇಳೆ ಕಳ್ಳ ತಾನು ಕದ್ದಿರುವ ಸೊತ್ತುಗಳನ್ನು ಅಜ್ಜರಕಾಡು ಮನೆಯೊಂದರಲ್ಲಿ ಬಚ್ಚಿಟ್ಟಿರುವುದಾಗಿ ತಿಳಿಸಿದ್ದಾನೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು 548.31 ಗ್ರಾಂ ತೂಕದ 65,79,720 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧಿನಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 11 ಮನೆಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಉಡುಪಿ ನಗರ ಠಾಣೆಯಲ್ಲಿ 5 ಪ್ರಕರಣಗಳು ದಾಖಲಾಗಿದ್ದು, 4 ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ.
ಹಿರಿಯಡ್ಕ ಠಾಣೆಯಲ್ಲಿ 03 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 1 ಪ್ರಕರಣದಲ್ಲಿ ಶಿಕ್ಷೆಯಾಗಿದೆ. ಬ್ರಹ್ಮಾವರ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದೆ ಹಾಗೂ ಮಣಿಪಾಲ್ ಠಾಣೆಯಲ್ಲಿ 1 ಪ್ರಕರಣವು ಮಾನ್ಯ ನ್ಯಾಯಲಯದ ವಿಚಾರಣೆಯಲ್ಲಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…