ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಕೊ*ಲೆಗೈದ ವೃದ್ಧ ಬಳಿಕ ತಾನು ನೇ*ಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೇಬಿ(60) ಕೊ*ಲೆಗೀಡಾದ ವೃದ್ಧೆಯಾಗಿದ್ದಾರೆ. ವೆಂಕಟೇಶನ್(65) ಹ*ತ್ಯೆಗೈದು ಆ*ತ್ಮಹ*ತ್ಯೆ ಮಾಡಿಕೊಂಡ ಪತಿ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಬೇಬಿ ಸ್ಟ್ರೋಕ್‌ಗೆ ಒಳಗಾಗಿ ವ್ಹೀಲ್ ಚೇರ್‌ನಲ್ಲಿ ಜೀವನ ಸಾಗಿಸುತ್ತಿದ್ದರು. ಗಂಡ ಹೆಂಡತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗಡೆ ಹೋಗುತ್ತಿದ್ದಂತೆ ಜಗಳ ಮಾಡಿಕೊಳ್ಳುತ್ತಿದ್ದರಂತೆ. ಹಾಗೇ, ಡಿ.2 ರಂದು ಇಬ್ಬರು ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ವೆಂಕಟೇಶನ್ ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಹ*ತ್ಯೆ ಮಾಡಿದ್ದಾರೆ. ಬಳಿಕ ಅದರಿಂದಲೇ ತಾನು ಕೂಡ ನೇ*ಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…