ಜನ ಮನದ ನಾಡಿ ಮಿಡಿತ

Advertisement

ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಮೃತ್ಯು

ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಫ್ಲೈಓವರ್ ಬಳಿ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಮೀರತ್‌ನಿಂದ ಗಾಜಿಯಾಬಾದ್‌ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕಾರಿನ ಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಯಾವುದೇ ಸೂಚನೆಗಳಿಲ್ಲದೆ ರಾತ್ರಿ ರಸ್ತೆ ಬದಿ ಟ್ರಕ್ ನಿಲ್ಲಿಸಿದ್ದ ಪರಿಣಾಮ ಅಪಘಾತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!