ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂ.ಬಿ.ಬಿ.ಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.
ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಫ್ಲೈಓವರ್ ಬಳಿ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು ಮೀರತ್‌ನಿಂದ ಗಾಜಿಯಾಬಾದ್‌ಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕಾರಿನ ಭಾಗಗಳನ್ನು ಕತ್ತರಿಸಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯಲಾಗಿದೆ. ಅಪಘಾತದ ಬಳಿಕ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರಾಫಿಕ್ ಕ್ಲಿಯರ್ ಮಾಡಿದ್ದಾರೆ. ಯಾವುದೇ ಸೂಚನೆಗಳಿಲ್ಲದೆ ರಾತ್ರಿ ರಸ್ತೆ ಬದಿ ಟ್ರಕ್ ನಿಲ್ಲಿಸಿದ್ದ ಪರಿಣಾಮ ಅಪಘಾತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…