ಜನ ಮನದ ನಾಡಿ ಮಿಡಿತ

Advertisement

ಕಡಬ: ಮನೆಗೆ ಅಕ್ರಮವಾಗಿ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ; ಹೆಡ್ ಕಾನ್‌ಸ್ಟೇಬಲ್ ಸೇವೆಯಿಂದ ಅಮಾನತು…!

ತಡರಾತ್ರಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ ಎಂದು ತಿಳಿದುಬಂದಿದೆ.

ರಾಜು ನಾಯ್ಕರವರು ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಬಾಬು ಗೌಡ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಈ ದೂರಿನ ಹಿನ್ನೆಲೆಯಲ್ಲಿ ಆರೋಪಿ ರಾಜು ನಾಯ್ಕರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಆತನನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!