ತಡರಾತ್ರಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ್ ಎಂಬಾತನನ್ನು ಬಂಧಿಸಿ ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ ಎಂದು ತಿಳಿದುಬಂದಿದೆ.
ರಾಜು ನಾಯ್ಕರವರು ತಡರಾತ್ರಿ ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಬಾಬು ಗೌಡ ಅವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಈ ದೂರಿನ ಹಿನ್ನೆಲೆಯಲ್ಲಿ ಆರೋಪಿ ರಾಜು ನಾಯ್ಕರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಆತನನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…