ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕುಖ್ಯಾತ ಅಂತರ್ ರಾಜ್ಯ ವಾಹನ, ಸರಗಳ್ಳತನ ಆರೋಪಿ ಬಂಧನ!!….

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನದ ಆರೋಪಿಯನ್ನು ಗುರುವಾರ ಬಂಧಿಸಿರುವ ಕದ್ರಿ ಪೊಲೀಸರು ನಾಲ್ಕು ದ್ವಿಚಕ್ರ ವಾಹನ ಮತ್ತು ಎರಡು ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ. ಕೇರಳದ ತಿರುವನಂತಪುರಂನ ಆದಿತ್ ಗೋಪಾನ್ ಯಾನೆ ಮುತ್ತು ಕೃಷ್ಣ (32) ಬಂಧಿತ ಆರೋಪಿಯಾಗಿದ್ದಾನೆ.

ನ.21ರಂದು ನಗರದ ಕದ್ರಿ ಬಟ್ಟಗುಡ್ಡೆ ಬಳಿ 83 ವರ್ಷ ಪ್ರಾಯದ ವಯೋವೃದ್ಧೆಯೊಬ್ಬರು ತನ್ನ ಮನೆಯ ಬಳಿ ಓಣಿಯಲ್ಲಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ಸರವನ್ನು ಕಸಿದುಕೊಂಡು ಹೋಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು, ಡಿ. 04 ರಂದು ಆರೋಪಿಯ ಬಗ್ಗೆ ವಿಶೇಷ ತಂಡಕ್ಕೆ ದೊರೆತ ಮಾಹಿತಿಯಂತೆ ಕದ್ರಿ ಜೋಗಿ ಮಠದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಸಂಶಯಾಸ್ಪದವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ ಪರಿಶೀಲಿಸಿದ್ದಾರೆ. ಆಗ ಈ ವಾಹನವು ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ ವಾಹನವಾಗಿದ್ದು, ವಿಚಾರಿಸಿದಾಗ ಆರೋಪಿಯು ಕಳ್ಳತನ ಮಾಡಿದ ದ್ವಿಚಕ್ರ ವಾಹನವನ್ನು ಬಳಸಿಕೊಂಡು ವಯೋವೃದ್ದರು, ಒಂಟಿ ಮಹಿಳೆಯರನ್ನು ಗುರುತಿಸಿ ಸರಗಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಮುಂದಿನ ತನಿಖೆಗಾಗಿ 3 ದಿನಗಳ ಕಾಲ ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯಿಂದ 4 ದ್ವಿಚಕ್ರ ವಾಹನ ಮತ್ತು ಚಿನ್ನಾಭರಣ ಸಮೇತ 5 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!