ಸಾರಿಗೆ ಬಸ್ ಪ*ಲ್ಟಿಯಾಗಿ ನಿರ್ವಾಹಕ ಮೃ*ತಪಟ್ಟ ಘಟನೆ ಡಿ.09 ರಂದು ಬೆಳಗ್ಗೆ ರಾಯಚೂರಿನ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.
ಬಸವರಾಜ್ ಮೃತ ಕಂಡಕ್ಟರ್. ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ಸಾಗುತ್ತಿದ್ದ ಸಂದರ್ಭ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರಂ*ತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪ*ಲ್ಟಿಯಾಗಿದ್ದು, ಪರಿಣಾಮ ಬಸ್‌ನಲ್ಲಿದ್ದ 40 ಜನರ ಪೈಕಿ 38 ಪ್ರಯಾಣಿಕರು ಗಾ*ಯಗೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಧಾವಿಸಿ, ಸಲಾಕೆಗಳಿಂದ ಬಸ್‌ನ ಗಾಜು ಒಡೆದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್ ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾ*ಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾರೆ. ಅಪಘಾ*ತದ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…