ಬಂಟ್ವಾಳ ತಾಲೂಕಿನ ಮಾಣಿ ಬಾಲವಿಕಾಸ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೃತಿ ಎನ್ ಪಿ. ಯವರು ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಡಿ. 06ರಂದು ನಡೆದ 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಹೆಮ್ಮೆಯನ್ನು ತನ್ನದಾಗಿಸಿಕೊಂಡಿದ್ದಾರೆ. ಹಿಂದೆ ಬಂಟ್ವಾಳ ತಾಲೂಕು ಮಟ್ಟದ ಡಿಸ್ಕಸ್ ತ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಹಾಗೂ ಜಿಲ್ಲಾ ಮಟ್ಟದಲ್ಲೂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿದ್ರು. ನಿಟಿಲಾಪುರದ ನಿವೃತ್ತ ಸೈನಿಕ ದಿನೇಶ್ ಕುಲಾಲ್ ಮತ್ತು ತೇಜಾಕ್ಷಿ ದಂಪತಿಗಳ ಪುತ್ರಿ ಕೃತಿ ಎನ್ ಪಿ. ಡಿಸ್ಕಸ್ ತ್ರೋ ಮಾತ್ರವಲ್ಲದೇ ಬಂಟ್ವಾಳ ತಾಲೂಕು ಮಟ್ಟದ ಶಾರ್ಟ್ ಪುಟ್, ಹ್ಯಾಮರ್ ತ್ರೋ ಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದರು. ಜಿಲ್ಲಾ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಇವರು ವಲಯ ಮತ್ತು ತಾಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ಚಾಂಪಿಯನ್ ಆಗಿಯೂ ಹೊರಹೊಮ್ಮಿದ್ದರು.
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…
ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತನನ್ನು ಪಚ್ಚನಾಡಿ ಬಂದಲೆ ನಿವಾಸಿ ಬಬಿತ್ ಎಂದು ಗುರುತಿಸಲಾಗಿದೆ. ಸಾವಿನ ಕುರಿತು…