ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ಕಾರ್ಯದರ್ಶಿ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾಗಿದ್ದ ವಿಜಯಾ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಎಂ.ರಾಮಣ್ಣ ರೈ ಅಲ್ಪಕಾಲದ ಅಸೌಖ್ಯದಿಂದ ಬಂಟ್ವಾಳ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪತ್ನಿ, ಇಬ್ಬರು ಪುತ್ರಿಯರನ್ನು ಹೊಂದಿದ್ದು, ಮೂಲತಃ ಅಂಬಾಬೀಡು ಮನೆಯವರಾಗಿದ್ದರು. ಪ್ರಸ್ತುತ ಮಾವಂತೂರುಗುತ್ತಿನಲ್ಲಿ ನೆಲೆಸಿದ್ದ ಅವರು, ಬಂಟ್ವಾಳ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾಗಿ, ವಲಯ ನಾಲ್ಕರ ಸಹಾಯಕ ಗವರ್ನರ್, 2023ರಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ರೋಟರಿ ಕ್ಲಬ್‌ನಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಜಯಾ ಬ್ಯಾಂಕ್‌ನಲ್ಲಿ ಸುದೀರ್ಘ ಅವಧಿಯಲ್ಲಿ ವಿವಿಧ ಶಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದು, ಬಂಟ್ವಾಳ ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಸಾಮಾಜಿಕವಾಗಿ ಹಲವು ಸಂಘ, ಸಂಸ್ಥೆಗಳಲ್ಲಿ ರಾಮಣ್ಣ ರೈ ಅವರು ಸಕ್ರಿಯರಾಗಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…