ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರೊಂದು ರಸ್ತೆ ಬದಿಯ ಮರಕ್ಕೆ ಢಿ*ಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಸಂಭವಿಸಿದೆ.

ಮೃತರನ್ನು ಟಿಪ್ಪರ್ ಚಾಲಕ ಶ್ರೀಕಾಂತ್ ಎಂದು ಗುರುತಿಸಲಾಗಿದೆ. ನಿಟ್ಟೂರಿನ ರಂಜನ್ ಶೆಟ್ಟಿ ಎಂಬವರ ಮಾಲಕತ್ವದ ಟಿಪ್ಪರ್‌ನ್ನು ಚಾಲಕ ಶ್ರೀಕಾಂತ್, ನಿಟ್ಟೂರಿನಿಂದ ಜೆಲ್ಲಿ ಲೋಡ್‌ಗಾಗಿ ಚಲಾಯಿಸಿಕೊಂಡು ಹೋಗಿದ್ದರು. ಚೇರ್ಕಾಡಿ ಗ್ರಾಮದ ಪೇತ್ರಿ-ಮಡಿ ರಸ್ತೆಯಲ್ಲಿ ಹೋಗುತ್ತಿದ್ದ ಟಿಪ್ಪರ್, ರಸ್ತೆಯ ತಿರುವಿನಲ್ಲಿರುವ ರಸ್ತೆ ಹೊಂಡಕ್ಕೆ ಬಿದ್ದಿದ್ದು, ಇದರಿಂದ ನಿಯಂತ್ರಣ ತಪ್ಪಿದ ಟಿಪ್ಪರ್, ರಸ್ತೆಯ ಬಲ ಬದಿಯ ದೊಡ್ಡ ಮರಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನ ಸೀಟ್‌ನಲ್ಲಿ ಶ್ರೀಕಾಂತ ಸಿಲುಕಿಕೊಂಡು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



