ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ. ಬಸ್ಸು ಕಾರು ಡಿ*ಕ್ಕಿ; ಸ್ಥಳದಲ್ಲಿಯೇ ಮೂವರು ಮೃತ್ಯು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಡಿ.10ರಂದು ತಡರಾತ್ರಿ ಬೆಂಗಳೂರಿನ ದೇವನಹಳ್ಳಿಯ ಹಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.

33 ವರ್ಷ ಪ್ರಾಯದ ಮೋಹನ್ ಕುಮಾರ್, 28 ವರ್ಷ ಪ್ರಾಯದ ಸುಮನ್ ಮತ್ತು 23 ವರ್ಷ ಪ್ರಾಯದ ಸಾಗರ್ (23) ಮೃತ ದುರ್ದೈವಿಗಳು. ಮೃತರೆಲ್ಲರೂ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದವರು. ಸಾಗರ್ ಯಲಹಂಕದಲ್ಲಿ ಬಿಕಾಂ ಓದುತ್ತಿದ್ದರೆ ಸುಮನ್ ಮತ್ತು ಮೋಹನ್ ಗ್ರಾನೈಟ್ ಉದ್ಯಮಿಗಳಾಗಿದ್ದವರು. ಮೂವರೂ ಸಾದಹಳ್ಳಿ ಗ್ರಾಮದ ಸ್ನೇಹಿತರಾಗಿದ್ದರು. ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ, ಎದುನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!