ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಡಿ.10ರಂದು ತಡರಾತ್ರಿ ಬೆಂಗಳೂರಿನ ದೇವನಹಳ್ಳಿಯ ಹಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ.
33 ವರ್ಷ ಪ್ರಾಯದ ಮೋಹನ್ ಕುಮಾರ್, 28 ವರ್ಷ ಪ್ರಾಯದ ಸುಮನ್ ಮತ್ತು 23 ವರ್ಷ ಪ್ರಾಯದ ಸಾಗರ್ (23) ಮೃತ ದುರ್ದೈವಿಗಳು. ಮೃತರೆಲ್ಲರೂ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದವರು. ಸಾಗರ್ ಯಲಹಂಕದಲ್ಲಿ ಬಿಕಾಂ ಓದುತ್ತಿದ್ದರೆ ಸುಮನ್ ಮತ್ತು ಮೋಹನ್ ಗ್ರಾನೈಟ್ ಉದ್ಯಮಿಗಳಾಗಿದ್ದವರು. ಮೂವರೂ ಸಾದಹಳ್ಳಿ ಗ್ರಾಮದ ಸ್ನೇಹಿತರಾಗಿದ್ದರು. ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದಾಗ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ, ಎದುನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…