ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳ ಮೂಲದ ಯುವಕನ ದಾರುಣ ಸಾವು..!

ಬೆಂಗಳೂರಿನ ಕೊಡ್ಲುಗೇಟ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ನವ ವಿವಾಹಿತ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.

ಮೃತ ಯುವಕನನ್ನು ಬಂಟ್ವಾಳ ತಾಲೂಕಿನ ಪೆರಿಯಪಾದೆ ಜಮಾಅತಿಗೊಳಪಟ್ಟ ಕುಂಟಾಲಪಳಿಕೆ-ಕೆಳಗಿನ ಮನೆ ನಿವಾಸಿ ದಿವಂಗತ ಅಹಮದ್ ಎಂಬವರ ಪುತ್ರ ಮುಹಮ್ಮದ್ ಹಾರಿಸ್ ಎಂದು ಹೆಸರಿಸಲಾಗಿದೆ. ಬೆಂಗಳೂರಿನ ಎಸಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಹಾರಿಸ್ ಡಿ. 9 ರಂದು ಕೆಲಸದ ನಿಮಿತ್ತ ತನ್ನ ಸಹೋದ್ಯೋಗಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಟಾಟಾ ಏಸ್ ಗೂಡ್ಸ್ ವಾಹನ ಹಿಂದಿನಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸವಾರ ಹಾರಿಸ್ ಸ್ಥಳದಲ್ಲೇ ಮೃತಪಟ್ಟರೆ, ಸಹಸವಾರ ಸಹೋದ್ಯೋಗಿ ಒಡಿಶಾ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!