ಜನ ಮನದ ನಾಡಿ ಮಿಡಿತ

Advertisement

ಪಡುಬಿದಿರೆ: ಟಯರ್ ಸ್ಫೋಟದಿಂದ ಮಗುಚಿ ಬಿದ್ದ ಟೆಂಪೋ; ಮಹಿಳೆ ಮೃತ್ಯು, 7 ಮಂದಿಗೆ ಗಾಯ

ಟೆಂಪೋವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಇಂದು(ಡಿ11) ಬೆಳಗ್ಗೆ ನಡೆದಿದೆ.

ಪಾರ್ವತಿ(30) ಮೃತಪಟ್ಟ ಮಹಿಳೆ. ಸಾವಿತ್ರಮ್ಮ, ಮಹಂತೇಶ್ ಸೇರಿ 7 ಜನರು ಗಾಯಗೊಂಡಿದ್ದಾರೆ. ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರು ಇದ್ದರು. ವೇಗವಾಗಿ ಸಾಗುತ್ತಿದ್ದ ಟೆಂಪೋವಿನ ಟಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳಕ್ಕೆ ಬಂದ ಸ್ಥಳೀಯರು ಟೆಂಪೋದ ಅಡಿಯಲ್ಲಿ ಸಿಲುಕಿಕೊಂಡ ಹಲವರನ್ನು ಹೊರತೆಗೆಯಲು ಸಹಾಯ ಮಾಡಿದರು. ಯಂತ್ರದ ಅಡಿಗೆ ಸಿಲುಕಿದ್ದ ಮಹಿಳೆಯನ್ನು ಕ್ರೇನ್‌ನ ಸಹಾಯದಿಂದ ಹೊರತೆಗೆಯಲಾಯಿತು. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಡುಬಿದ್ರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!