ಟೆಂಪೋವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಓರ್ವ ಮಹಿಳೆ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಇಂದು(ಡಿ11) ಬೆಳಗ್ಗೆ ನಡೆದಿದೆ.
ಪಾರ್ವತಿ(30) ಮೃತಪಟ್ಟ ಮಹಿಳೆ. ಸಾವಿತ್ರಮ್ಮ, ಮಹಂತೇಶ್ ಸೇರಿ 7 ಜನರು ಗಾಯಗೊಂಡಿದ್ದಾರೆ. ಮೂಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರು ಇದ್ದರು. ವೇಗವಾಗಿ ಸಾಗುತ್ತಿದ್ದ ಟೆಂಪೋವಿನ ಟಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಸ್ಥಳಕ್ಕೆ ಬಂದ ಸ್ಥಳೀಯರು ಟೆಂಪೋದ ಅಡಿಯಲ್ಲಿ ಸಿಲುಕಿಕೊಂಡ ಹಲವರನ್ನು ಹೊರತೆಗೆಯಲು ಸಹಾಯ ಮಾಡಿದರು. ಯಂತ್ರದ ಅಡಿಗೆ ಸಿಲುಕಿದ್ದ ಮಹಿಳೆಯನ್ನು ಕ್ರೇನ್‌ನ ಸಹಾಯದಿಂದ ಹೊರತೆಗೆಯಲಾಯಿತು. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪಡುಬಿದ್ರೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…