ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಫೇಕ್ ವೀಡಿಯೋ ಕಾಲ್‌ಗೆ ಬ*ಲಿಯಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!!

ವಿದ್ಯಾರ್ಥಿಯೊಬ್ಬ ಆತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.

ಕೇರಳ ಮೂಲದ ಜಗನ್ ಮೋಹನ್ (25) ಮೃ*ತ ವಿದ್ಯಾರ್ಥಿಯಾಗಿದ್ದಾನೆ. ಮೋಹನ್ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ ಮೋಹನ್ ಡೆ*ತ್ ನೋಟ್ ಬರೆದಿಟ್ಟು ನೇ*ಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಮೋಹನ್ ಮೂರು ನಂಬರ್ ಬರೆದಿದ್ದಾನೆ. ಪರಿಶೀಲನೆ ನಡೆಸಿದಾಗ ಫೇಕ್ ವೀಡಿಯೋ ಕಾಲ್‌ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಬೆತ್ತಲೆ ಫೋಟೋ ಹಾಗೂ ವೀಡಿಯೋ ವೈರಲ್ ಮಾಡುವುದಾಗಿ ಬೆ*ದರಿಕೆ ಹಾಕಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸೋಲದೇವನಹಳ್ಳಿ ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮ*ರಣೋತ್ತರ ಪರೀಕ್ಷೆ ನಡೆಸಿ, ಮೃ*ತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!