ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಂಟ್ವಾಳ ವಲಯದ ನಾವೂರು ಶೌರ್ಯ ಘಟಕದ ವತಿಯಿಂದ ಮಾಸಾಶನ ಪಡೆಯುತ್ತಿರುವಂತಹ ವೃದ್ಧ ಮಹಿಳೆ ಪೂವಕ್ಕ ಎಂಬವರಿಗೆ ಶೌಚಾಲಯ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ಪಾಯಸ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಬಡವರ ಸೇವೆ ಮಾಡುವುದರ ಮೂಲಕ ಸಮಾಜಕ್ಕೆ ಆದರ್ಶವಾಗಿದ್ದಾರೆ. ಇಲ್ಲಿನ ಶೌರ್ಯ ತಂಡದವರು ಇಂತಹ ಸಮಾಜಮುಖಿ ಕಾರ್ಯ ಮಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧ್ಯೇಯವನ್ನು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ ಎಂದಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಪಿ, ಪಂಚಾಯತ್ ಅಧ್ಯಕ್ಷೆ ಇಂದಿರಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಬರ್ಟ್, ಪಂಚಾಯತ್ ಸದಸ್ಯ ಜನಾರ್ಧನ, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…