ವದೆ ಮಾಡುವ ಉದ್ದೇಶದಿಂದ ಜಾನುವರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಸಹಿತ ಆರೋಪಿಯನ್ನು ವಶಪಡಿಸಿಕೊಂಡು ಆರೋಪಿಯ ಮನೆ ಹಾಗೂ ಕೊಟ್ಟಿಗೆ ಜಪ್ತಿ ಮಾಡಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಉಳಿ ಗ್ರಾಮದಲ್ಲಿ ನಡೆದಿದೆ.
ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು- ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಅಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿಯ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಒಂದು ಜಾನುವಾರನ್ನು ಹಗ್ಗದಿಂದ ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಕಂಡು ಬಂದಿರುತ್ತದೆ. ವಾಹನದ ಚಾಲಕನಾದ ಬಂಟ್ವಾಳ ಮಣಿನಾಲ್ಕೂರು ಗ್ರಾಮದ ನಿವಾಸಿ ಶ್ರೀಧರ ಪೂಜಾರಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಿಸಿದಾಗ ಬಂಟ್ವಾಳ ಸರಪ್ಪಾಡಿ ಎಂಬಲ್ಲಿ ಭೋಜ ಮೂಲ್ಯ ಎಂಬವರ ಮನೆಯಿಂದ ಯಾವುದೇ ದಾಖಲಾತಿ ಪರವಾನಿಗೆ ಇಲ್ಲದೇ ಎಲ್ಲಿಯೋ ಗೋಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಜಾನುವಾರನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡವುದರ ಬಗ್ಗೆ ತಿಳಿಸಿದ್ದು, ಮುಂದಿನ ಕಾನೂನುಕ್ರಮಕ್ಕಾಗಿ ಜಾನುವಾರು, ಅಟೋ ಹಾಗು ಒಂದು ಮೊಬೈಲ್ ಫೋನ್‌ನ್ನು ವಶಕ್ಕೆ ಪಡೆದು, ಅರೋಪಿಗಳ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ ಪ್ರಾಣಿ ಹಿಂಸೆ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಭೋಜ ಮೂಲ್ಯರವರ ಮನೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಜಾನುವಾರು ಕೊಟ್ಟಿಗೆ ಸೇರಿದಂತೆ ಆವರಣವನ್ನು ಕಾನೂನು ಪ್ರಕ್ರಿಯೆಯಂತೆ ಜಪ್ತಿ ಮಾಡಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…