ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಸುರತ್ಕಲ್: ಒಂಟಿ ವೃದ್ಧೆ ಮನೆಯಲ್ಲಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಮುಕ್ಕ ಮಿತ್ರಪಟ್ನದ ಒಂಟಿ ವೃದ್ಧೆ ಜಲಜ ಎಂಬವರ ಮನೆ ಹೊಕ್ಕು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ ಭಜನಾ ಮಂದಿರ ಬಳಿಯ ನಿವಾಸಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ (21), ಬೆಂಗಳೂರು ಎಳಚನಹಳ್ಳಿ, ಕಾಶಿನಗರ 5ನೇ ಕ್ರಾಸ್‌ನಿವಾಸಿ ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್( 33 ), ಬೆಂಗಳೂರು ಉಡಿಪಾಳ್ಯ ಕನಕಪುರ ಮುಖ್ಯ ರಸ್ತೆ ನಿವಾಸಿ ಗಿರೀಶ್ ಯಾನೆ ಸೈಕಲ್ ಗಿರಿ(28) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 4.43 ಲಕ್ಷ ರೂ. ಬೆಲೆ ಬಾಳುವ ಬಂಗಾರ, ಕೃತ್ಯಕ್ಕೆ ಬಳಸಿದ್ದ ಬೈಕ್, 3 ಮೊಬೈಲ್‌ಗಳು ಹಾಗೂ 3 ಸಾವಿರ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆದ ಬಳಿಕ ಸುರತ್ಕಲ್ ಪೊಲೀಸ್ ಉಪನಿರೀಕ್ಷಕ ರಘು ನಾಯ್ಕ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿ, ಕಳವು ನಡೆದಿದ್ದ ಮನೆಯ ಸಮೀಪದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ಶೈನ್ ಎಚ್. ಪುತ್ರನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ಜೈಸನ್ ಯಾನೆ ಲೆನ್ಸನ್ ಕಾರ್ಕಳನೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದು, ಕದ್ದ ಚಿನ್ನವನ್ನು ಬೆಂಗಳೂರಿಗೆ ಹೋಗಿ ವಿನೋದ್ ಕುಮಾರ್ ಗೆ ಮಾರಿರುವುದಾಗಿ ಬಾಯಿಬಿಟ್ಟಿದ್ದ. ಇದೇ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯದಲ್ಲಿ ನೇರ ಭಾಗಿಯಾಗಿದ್ದ ಆರೋಪಿಯಾದ ಇನ್ನೋರ್ವ ಆರೋಪಿ ಜೈಸನ್ ಯಾನೆ ಲೆನ್ಸನ್ ಕಾರ್ಕಳ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ ಎಂಬಾತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾಸೇವನೆಯ 1 ಪ್ರಕರಣ ದಾಖಲಾಗಿದೆ. ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ ಮೇಲೆ ಬೆಂಗಳೂರಿನ ಕೆ.ಎಸ್.ಲೇಔಟ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 2 ಕೊಲೆ, 2 ಕೊಲೆಯತ್ನ, 4 ದರೋಡೆ, 1 ಬೆದರಿಕೆ, 1 ಗಾಂಜಾ ಮಾರಾಟ, 1 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಗಿರೀಶ್ ಯಾನೆ ಸೈಕಲ್ ಗಿರಿ ಎಂಬಾತನ ಮೇಲೆ ಬೆಂಗಳೂರಿನ ಕಗ್ಗಲಿಪುರ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿದ್ದು, ಬೆಂಗಳೂರು ನಗರದ ವಿವಿಧ ಠಾಣೆಯಲ್ಲಿ 5 ಕೊಲೆಯತ್ನ, 1 ದರೋಡೆ, 3 ಹಲ್ಲೆ ಪ್ರಕರಣ ಸೇರಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!