ಮುಕ್ಕ ಮಿತ್ರಪಟ್ನದ ಒಂಟಿ ವೃದ್ಧೆ ಜಲಜ ಎಂಬವರ ಮನೆ ಹೊಕ್ಕು ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಗುಡ್ಡೆಕೊಪ್ಲ ಶ್ರೀ ರಾಮ ಭಜನಾ ಮಂದಿರ ಬಳಿಯ ನಿವಾಸಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ (21), ಬೆಂಗಳೂರು ಎಳಚನಹಳ್ಳಿ, ಕಾಶಿನಗರ 5ನೇ ಕ್ರಾಸ್‌ನಿವಾಸಿ ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್( 33 ), ಬೆಂಗಳೂರು ಉಡಿಪಾಳ್ಯ ಕನಕಪುರ ಮುಖ್ಯ ರಸ್ತೆ ನಿವಾಸಿ ಗಿರೀಶ್ ಯಾನೆ ಸೈಕಲ್ ಗಿರಿ(28) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಿಂದ 4.43 ಲಕ್ಷ ರೂ. ಬೆಲೆ ಬಾಳುವ ಬಂಗಾರ, ಕೃತ್ಯಕ್ಕೆ ಬಳಸಿದ್ದ ಬೈಕ್, 3 ಮೊಬೈಲ್‌ಗಳು ಹಾಗೂ 3 ಸಾವಿರ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ನಡೆದ ಬಳಿಕ ಸುರತ್ಕಲ್ ಪೊಲೀಸ್ ಉಪನಿರೀಕ್ಷಕ ರಘು ನಾಯ್ಕ್ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ಆರಂಭಿಸಿ, ಕಳವು ನಡೆದಿದ್ದ ಮನೆಯ ಸಮೀಪದ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ಶೈನ್ ಎಚ್. ಪುತ್ರನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಉಡುಪಿ ಜಿಲ್ಲೆ ಕಾರ್ಕಳ ನಿವಾಸಿ ಜೈಸನ್ ಯಾನೆ ಲೆನ್ಸನ್ ಕಾರ್ಕಳನೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದು, ಕದ್ದ ಚಿನ್ನವನ್ನು ಬೆಂಗಳೂರಿಗೆ ಹೋಗಿ ವಿನೋದ್ ಕುಮಾರ್ ಗೆ ಮಾರಿರುವುದಾಗಿ ಬಾಯಿಬಿಟ್ಟಿದ್ದ. ಇದೇ ಜಾಡು ಹಿಡಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯದಲ್ಲಿ ನೇರ ಭಾಗಿಯಾಗಿದ್ದ ಆರೋಪಿಯಾದ ಇನ್ನೋರ್ವ ಆರೋಪಿ ಜೈಸನ್ ಯಾನೆ ಲೆನ್ಸನ್ ಕಾರ್ಕಳ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳ ಪೈಕಿ ಶೈನ್ ಎಚ್. ಪುತ್ರನ್ ಯಾನೆ ಶಯನ್ ಯಾನೆ ಶೈನ್ ಎಂಬಾತನ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಗಾಂಜಾಸೇವನೆಯ 1 ಪ್ರಕರಣ ದಾಖಲಾಗಿದೆ. ವಿನೋದ್ ಯಾನೆ ಕೋತಿ ಯಾನೆ ವಿನೋದ್ ಕುಮಾರ್ ಮೇಲೆ ಬೆಂಗಳೂರಿನ ಕೆ.ಎಸ್.ಲೇಔಟ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದ್ದು, ಈತನ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ 2 ಕೊಲೆ, 2 ಕೊಲೆಯತ್ನ, 4 ದರೋಡೆ, 1 ಬೆದರಿಕೆ, 1 ಗಾಂಜಾ ಮಾರಾಟ, 1 ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಗಿರೀಶ್ ಯಾನೆ ಸೈಕಲ್ ಗಿರಿ ಎಂಬಾತನ ಮೇಲೆ ಬೆಂಗಳೂರಿನ ಕಗ್ಗಲಿಪುರ ಠಾಣೆಯಲ್ಲಿ ರೌಡಿಶೀಟ್ ತೆರೆಯಲಾಗಿದ್ದು, ಬೆಂಗಳೂರು ನಗರದ ವಿವಿಧ ಠಾಣೆಯಲ್ಲಿ 5 ಕೊಲೆಯತ್ನ, 1 ದರೋಡೆ, 3 ಹಲ್ಲೆ ಪ್ರಕರಣ ಸೇರಿ ಒಟ್ಟು 9 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…