ಉಳ್ಳಾಲ: ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓವರ್ ಲೋಡ್ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇದ್ದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದೆ. ಲಾರಿಯಲ್ಲಿ ಓವರ್ ಲೋಡ್ ಇದ್ದ ಹಿನ್ನೆಲೆಯಲ್ಲಿ ಚಾಲಕ ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿರುವುದು ದೃಶ್ಯದಲ್ಲಿ ಸೆರೆಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…