ಕೆಜಿಎಫ್ ಸಿನಿಮಾದ ಸಹ ನಿರ್ದೇಶಕನ ಪುತ್ರ ದಾರುಣವಾಗಿ ಸಾ*ವನ್ನಪ್ಪಿದ್ದಾನೆ. ಕೆ.ಜಿ.ಎಫ್ ಸಿನಿಮಾದ ಸಹ ನಿರ್ದೇಶಕ ಕೀರ್ತನ್ ನಾಡಗೌಡರ ನಾಲ್ಕು ವರ್ಷದ ಪುತ್ರ ಸೋನಾರ್ಷ್ ಮೃ*ತಪಟ್ಟಿದ್ದಾನೆ.
ಮೂರು ದಿನಗಳ ಹಿಂದೆ ಹೈದರಾಬಾದ್‌ಗೆ ಕುಟುಂಬ ಸಮೇತ ಕೀರ್ತನ್ ಗೌಡ ತೆರಳಿದ್ದರು. ಈ ವೇಳೆ ಸೋನಾರ್ಷ್ನನ್ನೂ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆಕಸ್ಮಿಕವಾಗಿ ಲಿಫ್ಟ್ ನಲ್ಲಿ ಸಿಲುಕಿದ ಸೋನಾರ್ಷ್ ಸಾ*ವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಾಖಲೆ ಬರೆದ ಕೆ.ಜಿ.ಎಫ್’ ಚಾಪ್ಟರ್ 2 ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ಕೀರ್ತನ್ ನಾಡಗೌಡ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದಾರೆ. ಇದೀಗ ಅವರು ನಿರ್ದೇಶಕರಾಗಿ ಡೆಬ್ಯೂ ಮಾಡಲು ತಯಾರಿ ನಡೆಸುತ್ತಿದ್ದು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಅವರೊಂದಿಗೆ ಹಾರರ್ ಚಿತ್ರವೊಂದನ್ನ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನಡೆಯುತ್ತಿದೆ. ಈ ಮಧ್ಯೆ ಅವರಿಗೆ ದೊಡ್ಡ ಆ*ಘಾತವೇ ಎದುರಾಗಿದ್ದು ಇದ್ದ ಏಕೈಕ ಪುತ್ರನನ್ನು ಕಳೆದುಕೊಂಡು ದಂಪತಿ ಶೋಕಸಾಗರದಲ್ಲಿ ಮುಳುಗಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…