ಜನ ಮನದ ನಾಡಿ ಮಿಡಿತ

Advertisement

ಕಡಬ: ರೈಲು ನಿಲ್ದಾಣದಲ್ಲಿ ಕಾಮಗಾರಿ ವೇಳೆ ಹಳಿಗೆ ಉರುಳಿ ಬಿದ್ದ ಕ್ರೇನ್

ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.

ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ರೇನ್ ಪ್ಲಾಟ್ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್ನ ಸೈಡ್‌ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ ರೈಲು ಹಳಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಕ್ರೇನ್ ಆಪರೇಟರ್ ಸ್ವಲ್ಪ ಗಾಯಗೊಂಡಿದ್ದಾರೆ.

ಬಳಿಕ ಎರಡು ಕ್ರೇನ್ ಗಳ ಮೂಲಕ ಕಾರ್ಯಾಚರಣೆ ನಡೆಸಿ ರೈಲು ಹಳಿಯಿಂದ ಉರುಳಿ ಬಿದ್ದ ಕ್ರೇನ್ ಅನ್ನು ಮೇಲೆತ್ತಿ ತೆರವು ಮಾಡಲಾಯಿತು. ನಿಲ್ದಾಣದಲ್ಲಿ ರೈಲು ವಿದ್ಯುತ್ ಮಾರ್ಗ ಹಾದು ಹೋಗಿದ್ದು, ನಿಲ್ದಾಣದಲ್ಲಿ ಇತರೆ ರೈಲು, ಗೂಡ್ಸ್ ವಾಹನ ಇಲ್ಲದೇ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸಮರ್ಪಕ ಕಾಮಗಾರಿಗೆ ರೈಲು ಬಳಕೆದಾರರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!