ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುವ ವೇಳೆ ಅಡಿಭಾಗ ಕುಸಿದು ಕ್ರೇನ್ ರೈಲು ಹಳಿಗೆ ಉರುಳಿ ಬಿದ್ದ ಘಟನೆ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಸಂಭವಿಸಿದೆ.
ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಕ್ರೇನ್ ಪ್ಲಾಟ್ ಫಾರ್ಮ್ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಉರುಳಿ ರೈಲು ಹಳಿ ಮೇಲೆ ಅಡ್ಡಲಾಗಿ ಬಿದ್ದಿದೆ. ಪ್ಲಾಟ್ ಫಾರ್ಮ್ನ ಸೈಡ್‌ನಲ್ಲಿದ್ದ ಕ್ರೇನ್ ಪ್ಲಾಟ್ ಫಾರ್ಮ್ನ ಬದಿ ಕುಸಿದ ಪರಿಣಾಮ ನಿಯಂತ್ರಣ ತಪ್ಪಿ ರೈಲು ಹಳಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆಯಲ್ಲಿ ಕ್ರೇನ್ ಆಪರೇಟರ್ ಸ್ವಲ್ಪ ಗಾಯಗೊಂಡಿದ್ದಾರೆ.
ಬಳಿಕ ಎರಡು ಕ್ರೇನ್ ಗಳ ಮೂಲಕ ಕಾರ್ಯಾಚರಣೆ ನಡೆಸಿ ರೈಲು ಹಳಿಯಿಂದ ಉರುಳಿ ಬಿದ್ದ ಕ್ರೇನ್ ಅನ್ನು ಮೇಲೆತ್ತಿ ತೆರವು ಮಾಡಲಾಯಿತು. ನಿಲ್ದಾಣದಲ್ಲಿ ರೈಲು ವಿದ್ಯುತ್ ಮಾರ್ಗ ಹಾದು ಹೋಗಿದ್ದು, ನಿಲ್ದಾಣದಲ್ಲಿ ಇತರೆ ರೈಲು, ಗೂಡ್ಸ್ ವಾಹನ ಇಲ್ಲದೇ ಇದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಸಮರ್ಪಕ ಕಾಮಗಾರಿಗೆ ರೈಲು ಬಳಕೆದಾರರು ಒತ್ತಾಯಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…