ಜನ ಮನದ ನಾಡಿ ಮಿಡಿತ

Advertisement

ಕಡಬ: ಡಿ. 20, 21ರಂದು ಕೇಪುವಿನಲ್ಲಿ ಕಡಬ ತಾಲೂಕು ತುಳು ಸಮ್ಮೇಳನ….!

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ನೇತ್ರಾವತಿ ತುಳು ಕೂಟ ರಾಮಕುಂಜ, ನೂಜಿಬಾಳ್ತಿಲ ತೆಗ್ ತುಳು ಕೂಟ ಆಶ್ರಯದಲ್ಲಿ ಕಡಬ ತಾಲೂಕು ಪ್ರಥಮ ತುಳು ಸಮ್ಮೇಳನ ಕೇಪು ದೇವಸ್ಥಾನದ ಸಭಾಂಗಣದಲ್ಲಿ ಡಿ. 20, 21ರಂದು ನಡೆಯಲಿದೆ ಎಂದು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನಾಧ್ಯಕ್ಷರಾಗಿ ಕೆ.ಸೇಸಪ್ಪ ರೈ ರಾಮಕುಂಜ ಆಯ್ಕೆಯಾಗಿದ್ದಾರೆ. ತುಳು ಭಾಷೆಯನ್ನು ಬೆಳೆಸಲು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕೆನ್ನುವ ಹಕ್ಕೊತ್ತಾಯವನ್ನು ಮಂಡಿಸುವ ಉದ್ದೇಶದೊಂದಿಗೆ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದಿದ್ದಾರೆ. ತುಳುನಾಡಿನಲ್ಲಿ ಹಾಸುಹೊಕ್ಕಾಗಿರುವ ವಿವಿಧ ಆಚರಣೆಗಳು, ಹಾಡು, ಕುಣಿತ, ಭಜನೆ ಮುಂತಾದ ಸ್ಪರ್ಧೆಗಳನ್ನು ಕಾಣಿಯೂರು, ನೂಜಿಬಾಳ್ತಿಲ, ರಾಮಕುಂಜ, ಸವಣೂರು ಭಾಗಗಳಲ್ಲಿ ನಡೆಸಿ ಡಿ. 20ರಂದು ಸಮ್ಮೇಳನದ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ದೊರೆಯಲಿದೆ. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಬಳಿಯಿಂದ ಮೆರವಣಿಗೆ ಹೊರಟು ಕೇಪು ದೇವಸ್ಥಾನದಲ್ಲಿ ಸಮಾಪನಗೊಳ್ಳಲಿದೆ. ಕಡಬ ಪ.ಪಂ. ಅಧ್ಯಕ್ಷೆ ತಮನ್ನಾ ಜಬಿನ್ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸಮಿತಿ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಗಿರಿಶಂಕರ ಸುಲಾಯ, ಕಾರ್ಯದರ್ಶಿ ಕಿಶೋರ್ ಕುಮಾರ್ ಬಿ., ಜತೆ ಕಾರ್ಯದರ್ಶಿ ಪ್ರೇಮಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!