ಜನ ಮನದ ನಾಡಿ ಮಿಡಿತ

Advertisement

ಶಿವಮೊಗ್ಗ: ಸಿಗಂದೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಶಾಲಾ ಬಸ್ ಢಿಕ್ಕಿ; ಹಲವು ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಇಡುವಾಣಿ ಬಳಿ ಇಂದು(ಡಿ.18) ಮುಂಜಾನೆ ನಡೆದಿದೆ.

ಶಾಲಾ ಬಸ್‌ನಲ್ಲಿದ್ದ ಬಹುತೇಕ ಎಲ್ಲಾ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ತೀವ್ರವಾಗಿ ಪೆಟ್ಟು ಬಿದ್ದಿದೆ. ಎರಡು ವಾಹನಗಳ ಚಾಲಕರು ಸೇರಿ, ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.

ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಶಾಲಾ ಬಸ್ ಮಧ್ಯೆ ಈ ದುರಂತ ಸಂಭವಿಸಿದೆ. ಎರಡು ಬಸ್ಸ್ನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

error: Content is protected !!