ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಸಾಗರ ತಾಲೂಕಿನ ಇಡುವಾಣಿ ಬಳಿ ಇಂದು(ಡಿ.18) ಮುಂಜಾನೆ ನಡೆದಿದೆ.
ಶಾಲಾ ಬಸ್‌ನಲ್ಲಿದ್ದ ಬಹುತೇಕ ಎಲ್ಲಾ ಮಕ್ಕಳಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ತೀವ್ರವಾಗಿ ಪೆಟ್ಟು ಬಿದ್ದಿದೆ. ಎರಡು ವಾಹನಗಳ ಚಾಲಕರು ಸೇರಿ, ಅನೇಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ.
ಸಾಗರದಿಂದ ಕಾರ್ಗಲ್ ಮಾರ್ಗವಾಗಿ ಸಿಗಂದೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಶಾಲಾ ಬಸ್ ಮಧ್ಯೆ ಈ ದುರಂತ ಸಂಭವಿಸಿದೆ. ಎರಡು ಬಸ್ಸ್ನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…