ಕರಾವಳಿ

ಮಂಗಳೂರು: ಬಜಪೆಯ ತಾರಿಕಂಬಳ ಬಂಟರ ಸಂಘದ ನಿವೇಶನದಲ್ಲಿ ಪಾಲ್ದಟ್ಟೆಡ್ ಬಂಟೆರೆ ಪರ್ಬ-2025..!

ಪಾಲ್ದಟ್ಟೆಡ್ ಬಂಟೆರೆ ಪರ್ಬ-2025 ಕಾರ್ಯಕ್ರಮವು ಡಿಸೆಂಬರ್ 28, ರವಿವಾರ ಬಂಟರ ಸಂಘ ಬಜಪೆ ವಲಯದ ಆಶ್ರಯದಲ್ಲಿ ನಡೆಯಲಿದೆ.

ಈ ಕ್ರಾಯಕ್ರಮದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ, ಬಂಟರ ಸಂಘಗಳ ಸಾಂಸ್ಕೃತಿಕ ಸ್ಪರ್ಧೆ, ಗೌರವ ಅಭಿನಂದನೆ, ವಿದ್ಯಾನಿಧಿಯ ಉದ್ಘಾಟನೆ, ಆರ್ಥಿಕ ಸಹಾಯಧನ ವಿತರಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಬಜಪೆಯ ತಾರಿಕಂಬಳ ಬಂಟರ ಸಂಘದ ನಿವೇಶನದಲ್ಲಿ ನಡೆಯಲಿರುವುದು ಎಂದು ಸಂಘದ ಉಪಾಧ್ಯಕ್ಷರಾದ ಸುಕೇಶ್ ಶೆಟ್ಟಿ ಮುಂಡಾರುಗುತ್ತು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿದ ಅವರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ದೀಪ ಪ್ರಜ್ವಲನೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ಇದರ ಅಧ್ಯಕ್ಷರಾದ ಅಜಿತ್ ಕುಮಾರ್ ರೈ ಮಾಲಾಡಿ ನೆರವೇರಿಸಲಿದ್ದು, ಬಂಟರ ಸಂಘ (ರಿ.) ಬಜಪೆ ವಲಯ ಅಧ್ಯಕ್ಷರಾದ ಬಾಬು ಶೆಟ್ಟಿ ಪೆರಾರ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸಂಜೆ ಸಮರೋಪ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ದೀಪ ಪ್ರಜ್ವಲನೆಯನ್ನು ಹೇರಂಬಾ ಇಂಡಸ್ಟ್ರೀಸ್ ಲಿಮಿಟೆಡ್, ಮುಂಬಯಿ ಇದರ ಆಡಳಿತ ನಿರ್ದೇಶಕರಾದ ಡಾ| ಕನ್ಯಾನ ಸದಾಶಿವ ಶೆಟ್ಟಿ ನೆರವೇಲಿಸಲಿದ್ದು, ಕಾರ್ಯಕ್ರಮದ ಉದ್ಘಾಟಕರಾಗಿ ಭವಾನಿ ಶಿಪ್ಪಿಂಗ್ ಕಾರ್ಪೊರೇಷನ್ ಲಿಮಿಟೆಡ್ ಮುಂಬೈ ಇದರ ಆಡಳಿತ ನಿರ್ದೇಶಕರಾದ ಕುಸುಮಾಧರ ಡಿ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಮಾಹಿತಿಯನ್ನು ನೀಡಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ಕುಮಾರ್ ಶೆಟ್ಟಿ, ಸದಸ್ಯರಾದ ಹರೀಶ್ ಶೆಟ್ಟಿ, ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…

3 days ago

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  …

3 days ago

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

  ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…

4 days ago

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…

6 days ago

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…

7 days ago