ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಶಾಸಕ ಅಶೋಕ್ ರೈ ಬ್ಯಾನರ್ ಗೆ ಹಾನಿ ; ಆರೋಪಿಗಳನ್ನು ಬಂಧಿಸಿ ಎಂದು ಯುವಕಾಂಗ್ರೆಸ್ ನಿಂದ ಪೋಲೀಸರಿಗೆ ಮನವಿ

ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.

ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ತು. ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ ವಹಿಸಿ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ್ದು ಮಾತ್ರವಲ್ಲದೆ ರಸ್ತೆ ಕಾಮಗಾರಿಗೆ ತಕ್ಷಣಕ್ಕೆ 5 ಲಕ್ಷ ರೂ ಅನುದಾನವನ್ನು ಒದಗಿಸಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹಾಕಲಾಗಿದ್ದ ಬ್ಯಾನರನ್ನು ಹರಿದು ಹಾಕಿದ್ದಾರೆ. ಕೃತ್ಯ ಎಸಗಿದ ವಿಘ್ನ ಸಂತೋಷಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ್ ಕಲ್ಲಾರೆ ತಿಳಿಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಬಡಗನ್ನೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!