ನರಿಮೊಗರು ಗ್ರಾಮದ ಶಿಬರ ನಡುವಾಲ್ ಎಂಬಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಅಭಿನಂದನೆ ಕೋರಿ ಹಾಕಲಾದ ಬ್ಯಾನರ್‌ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಖಿಲ್ ಕಲ್ಲಾರೆ ಪೊಲೀಸರಿಗೆ ಮನವಿ ನೀಡಿದ್ದಾರೆ.
ಆ ಭಾಗದಲ್ಲಿ ಬಹು ವರ್ಷಗಳಿಂದ ರಸ್ತೆ ಬೇಡಿಕೆ ಇತ್ತು. ಇಷ್ಟು ವರ್ಷ ಯಾರಿಂದಲೂ ಆ ಭಾಗದ ರಸ್ತೆ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಶಾಸಕರು ಮುತುವರ್ಜಿ ವಹಿಸಿ ಸ್ಥಳೀಯರ ಜೊತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಿದ್ದು ಮಾತ್ರವಲ್ಲದೆ ರಸ್ತೆ ಕಾಮಗಾರಿಗೆ ತಕ್ಷಣಕ್ಕೆ 5 ಲಕ್ಷ ರೂ ಅನುದಾನವನ್ನು ಒದಗಿಸಿದ್ದಾರೆ. ಇದಕ್ಕಾಗಿ ಆ ಪ್ರದೇಶದಲ್ಲಿ ಶಾಸಕರಿಗೆ ಅಭಿನಂದನೆ ಸಲ್ಲಿಸಿ ಹಾಕಲಾಗಿದ್ದ ಬ್ಯಾನರನ್ನು ಹರಿದು ಹಾಕಿದ್ದಾರೆ. ಕೃತ್ಯ ಎಸಗಿದ ವಿಘ್ನ ಸಂತೋಷಿಗಳನ್ನು ತಕ್ಷಣ ಬಂಧಿಸಬೇಕು ಇಲ್ಲವಾದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಖಿಲ್ ಕಲ್ಲಾರೆ ತಿಳಿಸಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ರಾಕೇಶ್ ಬಡಗನ್ನೂರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…