ಜನ ಮನದ ನಾಡಿ ಮಿಡಿತ

Advertisement

ಮಂಚಿ: ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 108 ಎಲೆಗಳ ಮಹಾರಂಗಪೂಜೆ..!

ಪುರಾತನ ಸಂಪ್ರದಾಯ ಮತ್ತು ಭಕ್ತಿಭಾವವನ್ನು ಇಂದಿಗೂ ಜೀವಂತವಾಗಿಟ್ಟಿರುವ ಮಂಚಿ ಗೋಪಾಲಕೃಷ್ಣ ದೇವಸ್ಥಾನ, ಭಕ್ತಿ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಕಂಗೊಳಿಸುತ್ತಿದೆ.

ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 108 ದಿನಗಳ ಸಂಧ್ಯಾ ಭಜನೆ, ಶ್ರೀ ರಂಗಪೂಜೆ, ಅನ್ನಸಂತರ್ಪಣೆ ಸೇವೆಯ ಮಂಗಳೋತ್ಸವ ಮತ್ತು 108 ಎಲೆಗಳ ಮಹಾರಂಗಪೂಜೆ ಡಿ. 20 ಮತ್ತು 21ರಂದು ನಡೆಯಲಿದೆ. ಡಿ. 20 ಶನಿವಾರದಂದು ಸೂರ್ಯಾಸ್ತದಿಂದ ಮರುದಿನ ಸೂರ್ಯಾಸ್ತದವರೆಗೆ ವಿವಿಧ ಭಜನಾ ಸಹಕಾರದೊಂದಿಗೆ ಏಕಾಹ ಭಜನೆ ನಡೆಯಲಿದೆ.

ಡಿ. 21 ರಂದು ಬೆಳಿಗ್ಗೆ 9-30 ರಿಂದ ಸೀಯಾಳಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಲಿದೆ. ಸಾಯಂಕಾಲ 7 ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಎಡನೀರು ಮಠ ಕಾಸರಗೋಡು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ಆರ್ಶೀವಚನ ನೀಡಲಿದ್ದಾರೆ. ಸಾಂದೀಪನಿ ಸಾಧನಾಶ್ರಮ, ಶ್ರೀ ಕ್ಷೇತ್ರ ಕೇಮಾರು ಇಲ್ಲಿನ ಪರಮಪೂಜ್ಯ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದೀಪ ಪ್ರಜ್ವಲನೆಯನ್ನು ಮಾಡಲಿದ್ದಾರೆ.

ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಚಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ಟರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಂಬೈಯ ಉದ್ಯಮಿ ಸದಾನಂದ ಶೆಟ್ಟಿ ಮಂಡಾಡಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಜಗನ್ನಾಥ ಚೌಟ ಬದಿಗುಡ್ಡೆ, ಹಾಗೂ ಯೋಗಿಶ್ ಕುಮಾರ್ ನಡಕ್ಕರ ಬೆಳ್ತಂಗಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನು ರಾತ್ರಿ 8-30ಕ್ಕೆ ದೇವರಿಗೆ ಮಹಾರಂಗಪೂಜೆ ನಡೆಯಲಿದೆ. ಡಿ. 21 ರಂದು ನಡೆಯುವ ಎಲ್ಲಾ ದೃಶ್ಯಾವಳಿಗಳು ನಿಮ್ಮ ನೆಚ್ಚಿನ ಅಭಿಮತ ಯೂಟ್ಯೂಬ್ ಚಾನಲ್ ನಲ್ಲಿ ನೇರಪ್ರಸಾರಗೊಳ್ಳಲಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!